ರಾಜ್ಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: 87.56 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ವಶಕ್ಕೆ

Raghavendra Adiga

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ.

ಅಕ್ರಮವಾಗಿ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿದ್ದ 87.56 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.

ಆಧುನಿಕ ತಂತ್ರಜ್ಞಾನದ ನೆರವಿನಿಂದ ಪೇಸ್ಟ್ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದ ಕಳ್ಳಸಾಗಣೆಗಾರರನ್ನು ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದು ಅವರಿಂದ 86,76,026 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನ.27ರಂದು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

SCROLL FOR NEXT