ರಾಜ್ಯ

ಕೊರೋನಾ ಕ್ಷೀಣ: ರಾಜ್ಯದಲ್ಲಿ ಇಂದು ದಾಖಲೆಯ ಅತೀ ಕಡಿಮೆ 998 ಮಂದಿಗೆ ಸೋಂಕು ಪತ್ತೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಇಂದು 998 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,84,897ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,778 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,49,821 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 23,279 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 444 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,69,734ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,137 ಮಂದಿ ಬಲಿಯಾಗಿದ್ದಾರೆ.

SCROLL FOR NEXT