ರಾಜ್ಯ

ವಾಯುಭಾರ ಕುಸಿತ: ರಾಜ್ಯದಲ್ಲಿ ಡಿಸೆಂಬರ್ 4ರವರೆಗೂ ಕಾಡಲಿದೆ ಮಳೆ ಕಾಟ!

Manjula VN

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ನಿವಾರ್ ಚಂಡ ಮಾರುತದ ಅಡ್ಡ ಪರಿಣಾಮದಿಂದಾಗಿ ಡಿಸೆಂಬರ್ 4ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 36 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ.

ಚಂಡಮಾರುತಗಳ ಪ್ರಭಾವದಿಂದ ಮುಂದಿನ 36 ಗಂಟೆಗಳಲ್ಲಿ ಕರ್ನಾಟಕದ ವಿವಿಧೆಡೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪುದುಚೇರಿ, ಕಾರೈಕಲ್, ಕೇರಳ, ಆಂಧ್ರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಏಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.1 ರಿಂದ 4ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

SCROLL FOR NEXT