ಬೆಂಗಳೂರು: ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜ ಯೇಂದ್ರನಿಗೆ ಕೊರೋನಾ ಸೋಂಕು ಧೃಡಪಟ್ಟಿದೆ.ನಿನ್ನೆ ಸಾಮಾನ್ಯ ತಪಾಸಣೆಗೆ ಒಳಗಾದ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ,ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿ ಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.