ಕಾಂಗ್ರೆಸ್ ಪ್ರತಿಭಟನೆ 
ರಾಜ್ಯ

ರಾಹುಲ್ -ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಕಾಂಗ್ರೆಸ್ ಪ್ರತಿಭಟನೆ: ಜೆಡಿಎಸ್ ಖಂಡನೆ

ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಮೇಲೆ ಪೋಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದ ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಸಂತ್ರಸ್ತೆಯ ಪೋಷಕರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಮೇಲೆ ಪೋಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದ ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಆನಂದ್ ರಾವ್ ವೃತ್ತದ ಬಳಿ ಇವರು ಗಾಂಧಿ ಪ್ರತಿಮೆಯವರೆಗೂ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ನಡೆಸಿತು.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕಿ ಸೌಮ್ಯಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ಭವನದಿಂದ ಆನಂದರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆವರೆಗೂ ಪಂಜಿನ ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಉತ್ತರ ಪ್ರದೇಶದಲ್ಲಿ ಹಿರಿಯ ನಾಯಕರಿಗೆ ರಕ್ಷಣೆ ಇಲ್ಲ ಎಂದಾದರೇ ದಲಿತರು ಮತ್ತು ಮಹಿಳೆಯರು ಹಾಗೂ ರೈತರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ, ಮಹಿಳೆಯರ ಹಾಗೂ ದಲಿತರ ಹಿತ ಕಾಯುವಲ್ಲಿ ಸಿಎಂ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಹಿರಿಯ ನಾಯಕರಾದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶ ಸರ್ಕಾರ ಈ ರೀತಿ ನಡೆಸಿಕೊಳ್ಳಬಾರದಿತ್ತು, ಪ್ರತಿಭ ನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು, ಅವರು ಉತ್ತಮ ಕಾರಣಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಹತ್ರಾಸ್‌ಗೆ ತೆರಳುತ್ತಿದ್ದಾಗ ಗುರುವಾರ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ ಎಂದು
ಅಭಿಪ್ರಾಯಪಟ್ಟಿದ್ದಾರೆ. ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ ಎಂದರೆ, ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿದ್ದಾರೆ ಎಂಬುದರಲ್ಲಿ ನನಗೆ ಉತ್ಪ್ರೇಕ್ಷೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!