ರಾಜ್ಯ

ಕೊರೋನಾ ಆತಂಕ: ಕಟ್ಟುನಿಟ್ಟಿನ ಕ್ವಾರಂಟೈನ್ ನಲ್ಲಿ ದಸರಾ ಗಜಪಡೆ!

Manjula VN

ಮೈಸೂರು: ಕೊರೋನಾ ಸೋಂಕು ತಗುಲುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ವೇಳೆ ಅಂಬಾರಿ ಹೊರುವ ಆನೆಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. 

ಆನೆಗಳ ತೂಕಗಳಿಗೂ ಹೊರಗೆ ಕರೆದೊಯ್ಯಲಾಗುತ್ತಿಲ್ಲ. ಅರಣ್ಯ ಇಲಾಖೆ ಕೂಡ ಕೆಲ ಕಾರ್ಯವಿಧಾನಗಳನ್ನು ಕೈಬಿಟ್ಟಿದ್ದು, ಆನೆಗಳು, ಮಾವುತರು ಹಾಗೂ ಕಾವಾಡಿಗಳೂ ಕೂಡ ವಿಹಾರಗಳಿಗೆ ತೆರಳದಂತೆ ಕಟ್ಟುನಿಟ್ಟಿನ ನಿಯಗಳನ್ನು ಜಾರಿ ಮಾಡಿದ್ದಾರೆ. 

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ (ವನ್ಯಜೀವಿ) ಜೆ ಅಲೆಕ್ಸಾಂಡರ್ ಅವರು ಈ ಬಾರಿ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ. ಆನೆಗಳು ಹುನ್ಸೂರಿನ ವೀರನಹೋಸಹಳ್ಳಿಯಿಂದ ಹೊರಡುವಾಗ ಈಗಾಗಲೇ ತೂಗುತ್ತಿವೆ ಎಂದು ಹೇಳಿದ್ದಾರೆ.

ಈ ನಡುವೆ ದಸರಾ ಗಜಪಡೆಯೊಂದಿಗೆ ಮೈಸೂರು ಅರಮನೆಗೆ ಆಗಮಿಸಿರುವ ಮಾವುತರು, ಕಾವಾಡಿಗಳು, ಸಹಾಯಕರು ಹಾಗೂ ಆನೆಗಳ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಅರಣ್ಯ ಸಿಬ್ಬಂದಿ ಸೇರಿದಂತೆ 19 ಮಂದಿಗೆ ಶನಿವಾರ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಎಲ್ಲರ ಫಲಿತಾಂಶವೂ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ. 

SCROLL FOR NEXT