ಬೆಂಗಳೂರು: ಸಿಬಿಐ ದಾಳಿ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ನಗರದ ಸಿಬಿಐ ಘಟಕದಲ್ಲಿ ಎಫ್ಐಆರ್ ದಾಖಲಾಗಿದೆ.
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಕೇಸಿನಡಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದ್ದು ಕನಕಪುರ ಬಂಡೆ, ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಕಾಂಗ್ರೆಸ್ ನಾಯಕನಿಗೆ ಇದು ಇನ್ನಷ್ಟು ಕಂಟಕವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಆರ್ ಆರ್ ನಗರ ಮತ್ತು ಶಿರಾ ಉಪ ಚುನಾವಣೆ ಕ್ಷೇತ್ರಗಳ ಚುನಾವಣೆ ಹೊಸ್ತಿಲಿನಲ್ಲಿ ಕೆಪಿಸಿಸಿ ಅಧ್ಯಕ್ಷರ ಮನೆ ಮೇಲೆ ಸಿಬಿಐ ರೈಡ್ ಆಗಿರುವುದು ನಮ್ಮ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು, ಬಿಜೆಪಿಯ ರಾಜಕೀಯ ಷಡ್ಯಂತ್ರವಿದು ಎಂದು ಕಾಂಗ್ರೆಸ್ ನಾಯಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.