ರಾಜ್ಯ

ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮುಕ್ತಾಯ: 57 ಲಕ್ಷ ರೂ. ನಗದು, ಮಹತ್ವದ ದಾಖಲೆ ಪತ್ತೆ

Lingaraj Badiger

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದ ಸಿಬಿಐ, 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಡಿಕೆಶಿ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಡಿಕೆ ಶಿವಕುಮಾರ್ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿ, 14 ಸ್ಥಳಗಳಲ್ಲಿ ಹುಡಕಾಟ ನಡೆಸಲಾಗಿದೆ. ಪರಿಶೀಲನೆ ವೇಳೆ 57 ಲಕ್ಷ ರೂ ನಗದು ಹಾಗೂ ಆಸ್ತಿ ದಾಖಲೆಗಳು, ಬ್ಯಾಂಕ್ ಗೆ ಸಂಬಂಧಿಸಿದ ಮಾಹಿತಿಗಳು, ಕಂಪ್ಯೂಟರ್ ಹಾರ್ಡ್ ಡಿಸ್ಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

74.93 ಕೋಟಿ ರೂ ಅಸಮರ್ಪಕ ಆಸ್ತಿಗಳನ್ನು ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾರ್ಚ 2020 ರಲ್ಲಿ ಕರ್ನಾಟಕ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕಾಯ್ದೆಯ 6 ರ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಅದರ ಭಾಗವಾಗಿ ಕೇಂದ್ರ ಸರ್ಕಾರ ಡಿಎಸ್ ಪಿಇ ಕಾಯ್ದೆಯ ಅಧಿಸೂಚನೆ 5ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ ಎಂದು ಸಿಬಿಐ ತಿಳಿಸಿದೆ.

SCROLL FOR NEXT