ರಾಜ್ಯ

ಲಂಕೇಶ್ ಆಡಿಯೋಬುಕ್ಸ್- ಲಂಕೇಶ್ ಆ್ಯಪ್ ಬಿಡುಗಡೆ

ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪುಸ್ತಕಗಳನ್ನು ಇನ್ನುಮುಂದೆ ಮೊಬೈಲ್ ಅಥವಾ ಲ್ಯಾಪ್‍ಟ್ಯಾಪ್‍ಗಳ ಮೂಲಕವೂ ಓದಬಹುದಾಗಿದೆ.

ಬೆಂಗಳೂರು: ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪುಸ್ತಕಗಳನ್ನು ಇನ್ನುಮುಂದೆ ಮೊಬೈಲ್ ಅಥವಾ ಲ್ಯಾಪ್‍ಟ್ಯಾಪ್‍ಗಳ ಮೂಲಕವೂ ಓದಬಹುದಾಗಿದೆ.

ಪತ್ರಕರ್ತ ಹಾಗೂ ನಿರ್ದೇಶಕರೂ ಆದ ಇಂದ್ರಜಿತ್ ಲಂಕೇಶ್ ತಮ್ಮ ತಂದೆ ಲಂಕೇಶ್ ಅವರ ಕೃತಿಗಳು ಓದುಗರೆಲ್ಲರಿಗೂ ಸುಲಭವಾಗಿ ಸಿಗಲೆಂದು ಅವುಗಳನ್ನೆಲ್ಲ ಡಿಜಿಟಲ್ ರೂಪಕ್ಕೆ ತಂದಿದ್ದಾರೆ.  

ಲಂಕೇಶ್ ಆಡಿಯೋಬುಕ್ಸ್ ಹಾಗೂ ಲಂಕೇಶ್ ಆ್ಯಪ್‍ನ ಬಿಡುಗಡೆ ಕಾರ್ಯಕ್ರಮ ಗಾಂಧಿಭವನದಲ್ಲಿ ನಡೆಯಿತು. ಇದರ ಜತೆಗೇ ಲಂಕೇಶ್ ಪತ್ರಿಕೆಯ 41ನೇ ವರ್ಷದ ವಿಶೇಷ ಸಂಚಿಕೆ ಸಹ ಬಿಡುಗಡೆಯಾಗಿದೆ.

ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ನಟ ಶಿವರಾಜ್‍ಕುಮಾರ್ ಅಧ್ಯಕ್ಷತೆಯಲ್ಲಿ ಈ ಸಮಾರಂಭ ನೆರವೇರಿದೆ.ಅಲ್ಲದೆ ಖ್ಯಾತ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ