ಸಂಗ್ರಹ ಚಿತ್ರ 
ರಾಜ್ಯ

ಐಪಿಎಲ್ ಬೆಟ್ಟಿಂಗ್ ದಂಧೆ: ಸಿಸಿಬಿ ಪೊಲೀಸರಿಂದ ನಾಲ್ವರ ಬಂಧನ

ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. 

ಬೆಟ್ಟಿಂಗ್ ಆ್ಯಂಪ್'ಗಳನ್ನು ಬಳಸಿಕೊಂಡೇ ಸಿಸಿಬಿ ಪೊಲೀಸರು ನಗರದ ಪುಟ್ಟೇನಹಳ್ಳಿ, ಕೋಣನಕುಂಟೆ ಮತ್ತು ಬ್ಯಾಟರಾಯನಪುರ ಮೂರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಹೇಳಿದ್ದಾರೆ. 

ಬಂಧಿತ ಆರೋಪಿಗಳಿಂದ ರೂ.4,91,510 ನಗದು, 6 ಮೊಬೈಲ್ ಫೋನ್'ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಸೆಪ್ಟೆಂಬರ್ 19 ರಿಂದ ಐಪಿಎಲ್ 2020 ಆರಂಭವಾಗಿದ್ದು, ನವೆಂಬರ್ 10ರವರೆಗೂ ನಡೆಯಲಿದೆ. ಯುಎಇ - ಅಬುಧಾಬಿ, ಶಾರ್ಜಾ ಮತ್ತು ದುಬೈನಲ್ಲಿ ಪಂದ್ಯಗಳು ನಡೆಯುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!