ರಾಜ್ಯ

ಆರ್‌.ಆರ್‌.ನಗರ ಉಪ ಚುನಾವಣೆ: ಸಾಮಾಜಿಕ ಅಂತರ ಕಾಪಾಡಿಕೊಳ್ಳಲು 68 ಹೊಸ ಮತಗಟ್ಟೆ

Lingaraj Badiger

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣಾ ವೇಳೆ ಕೋವಿಡ್‌ ಮಾರ್ಗಸೂಚಿ ಅನುಸಾರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ 68 ಹೊಸ ಕಟ್ಟಡಗಳನ್ನು ಗುರುತಿಸಿ, ಮತಗಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಬೆಂಗಳೂರು ನಗರ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ಎಂ.ಮಂಜುನಾಥ್‌ ಪ್ರಸಾದ್‌ ಅವರು ಹೇಳಿದ್ದಾರೆ.

ಬಸವೇಶ್ವರ ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾ ಸಂಕೀರ್ಣದ ಕಛೇರಿಯ ಸ್ಟ್ರಾಂಗ್ ರೂಂನಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳ ಸಿದ್ಧತೆಯ ಕಾರ್ಯ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಮತಗಟ್ಟೆಗಳಿಗೆ ಸಣ್ಣ-ಸಣ್ಣ ಕೊಠಡಿಗಳಿರುವ ಪರಿಣಾಮ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಆದ್ದರಿಂದ ಹೊಸದಾಗಿ 68 ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಬಗ್ಗೆ ರಾಜಕೀಯ ಮುಖಂಡರ ಜೊತೆ ಸಭೆ ನಡೆಸಿ ಅವರ ಸಮ್ಮತಿ ಪಡೆದು ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನಿನ್ನೆ ಕಳುಹಿಸಿಕೊಡಲಾಗಿದೆ. ಸ್ಥಳ ಬದಲಾವಣೆ ಮಾಡಿರುವ ಬಗ್ಗೆ ಜನರಿಗೂ ಮಾಹಿತಿ ಒದಗಿಸಲಾಗುವುದು ಎಂದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಮತಎಣಿಕೆ ನಡೆಯಲಿದೆ. ಈ ಸಂಬಂಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

SCROLL FOR NEXT