ಸುರೇಶ್ ಅಂಗಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿರುವ ಸಿಎಂ ಯಡಿಯೂರಪ್ಪ 
ರಾಜ್ಯ

ಸುರೇಶ್ ಅಂಗಡಿ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದ್ದರು.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಾಕಿರುವ ಕುರಿತು ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದರು.

ಇದಕ್ಕೂ ಮೊದಲು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನವದೆಹಲಿಯಲ್ಲಿ ಸುರೇಶ್ ಅಂಗಡಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ನೀಡಲಾಗುವುದು. ಅವರ ಸ್ಮಾರಕ ನಿರ್ಮಿಸುವುದು ನನ್ನ ಕರ್ತವ್ಯವಾಗಿದೆ ಎಂದರು

ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ಅವರು ನೀಡಿದ್ದಾರೆ ಎಂದು ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ