ಹೈಕೋರ್ಟ್ 
ರಾಜ್ಯ

ಕೋವಿಡ್-19 ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ: ಜಿಲ್ಲಾವಾರು ಅಂಕಿಅಂಶ ನೀಡುವಂತೆ ಹೈಕೋರ್ಟ್ ಸೂಚನೆ

ಕೋವಿಡ್-19 ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಜಿಲ್ಲಾವಾರು ಕೋವಿಡ್ ಆಸ್ಪತ್ರೆಗಳಲ್ಲಿ ಇರುವ ಬೆಡ್ ಗಳು, ಐಸಿಯುಗಳು, ವೆಂಟಿಲೇಟರ್ ಗಳ ಜಿಲ್ಲಾವಾರು ಮಾಹಿತಿಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಬೆಂಗಳೂರು: ಕೋವಿಡ್-19 ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಜಿಲ್ಲಾವಾರು ಕೋವಿಡ್ ಆಸ್ಪತ್ರೆಗಳಲ್ಲಿ ಇರುವ ಬೆಡ್ ಗಳು, ಐಸಿಯುಗಳು, ವೆಂಟಿಲೇಟರ್ ಗಳ ಜಿಲ್ಲಾವಾರು ಮಾಹಿತಿಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ತನ್ನ ಅಕ್ಟೋಬರ್ 3ರ ಆದೇಶವನ್ನು ತಿದ್ದುಪಡಿ ಮಾಡಿ ಕೋವಿಡ್-19 ಆಸ್ಪತ್ರೆಗಳ ತಪಾಸಣೆ ವಿಧಾನಗಳಲ್ಲಿ ಮಾರ್ಪಾಡು ಮಾಡುವಂತೆ ಹೇಳಿದೆ.

ರಾಜ್ಯ ಸರ್ಕಾರದ ಆದೇಶದ ಪ್ರಕಾರ ತಜ್ಞರ ಸಮಿತಿ ತಪಾಸಣೆ ಮಾಡಬೇಕೆಂದರೆ ಬೆಂಗಳೂರು ನಗರದ ಆಸ್ಪತ್ರೆಯೊಂದರಲ್ಲಿಯೇ 380 ಆಸ್ಪತ್ರೆಗಳಿಗೆ ಭೇಟಿ ನೀಡಲು ಒಂದು ವರ್ಷಕ್ಕಿಂತ ಹೆಚ್ಚು ಸಮಯ ಬೇಕಾಗಬಹುದು, ಬೇರೆ ಜಿಲ್ಲೆಗಳಲ್ಲಿ ಕೂಡ ಇದೇ ಸ್ಥಿತಿಯಿದೆ ಎಂದು ನ್ಯಾಯಾಲಯ ಹೇಳಿದೆ.

ಬಹುತೇಕ ಮಂದಿ ಪಿಪಿಇ ಕಿಟ್ ಗಳನ್ನು ಬಳಸುತ್ತಿದ್ದು, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಲಾಗಿದಿಯೇ ಎಂದು ಸರ್ಕಾರ, ಬಿಬಿಎಂಪಿ ಮತ್ತು ಕೆಎಸ್ ಪಿಸಿಬಿಗಳಿಂದ ಪ್ರತಿಕ್ರಿಯೆಯನ್ನು ಕೋರ್ಟ್ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video