ರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್
ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬೆಂಗಳೂರು: ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಮಂಗಳವಾರ ಒಂದೇ ದಿನ 1,04, 348 ಕೋವಿಡ್ ಟೆಸ್ಟ್ ನಡೆಸುವ ಮೂಲಕ ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ ಎಂದಿದ್ದಾರೆ.
ರಾಜ್ಯಾದ್ಯಂತ ಇರುವ 146 ಲ್ಯಾಬ್ಗಳ ಮೂಲಕ 55,690 ಆರ್ಟಿಪಿಸಿಆರ್ ಹಾಗೂ 48,658 ರಾಪಿಟ್ ಆಂಟಿನೆಜ್ ಟೆಸ್ಟ್ ನಡೆಸಲಾಗಿದೆ. ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.