ರಾಜ್ಯ

ರಾಜ್ಯದಲ್ಲಿ ಲಭ್ಯವಿರುವ ಹಾಸಿಗೆ, ವೆಂಟಿಲೇಟರ್‌ ಮಾಹಿತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Vishwanath S

ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು, ವೆಂಟಿಲೇಟರ್‌ಗಳ ಕುರಿತು ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕೋವಿಡ್‌ಗೆ ಸಂಬಂಧಿಸಿದ ಪಿಐಎಲ್‌ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕಾ ನೇತೃತ್ವದ ನ್ಯಾಯಪೀಠ, ರಾಜ್ಯದಲ್ಲಿ ಲಭ್ಯವಿರುವ ಐಸಿಯು ವಾರ್ಡ್‌ಗಳು ಮತ್ತು ವೆಂಟಿಲೇಟರ್‌ಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಜೊತೆಗೆ, ಈ ಘಟಕಗಳಿಗೆ ಆಮ್ಲಜನಕ ಪೂರೈಸುವ ಕ್ರಮಗಳ ಕುರಿತು ಕೂಡ ಮಾಹಿತಿ ನೀಡುವಂತೆ ಬಿಬಿಎಂಪಿ ಮತ್ತು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು 10,947 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,547ಕ್ಕೆ ಏರಿಕೆಯಾಗಿದೆ.

SCROLL FOR NEXT