ರಾಜ್ಯ

ಮೈಸೂರು ದಸರಾ ಸಿದ್ಧತೆ ಕುರಿತ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು

Manjula VN

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾಡಹಬ್ಬ ದಸರಾ ಉತ್ಸವ ಆಚರಿಸುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವವನ್ನು ನಡೆಸುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಈ ಸೂಚನೆಯಂತೆ ದಸರಾ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತೀ ಹೆಚ್ಚು ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವವನ್ನು ಸರಲವಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ಸಾರ್ವಜನಿಕರು ಸರ್ಕಾರದ ಮೇಲೆ ಜವಾಬ್ದಾರಿ ಹಾಕಿ ಸುಮ್ಮನಿರಬಾರದು. ಸರ್ಕಾರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದಿದ್ದಾರೆ. 

ಸಾರ್ವಜನಿಕರು ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಸುರಕ್ಷತೆಯಿಂದ ಸರಳ ದಸರಾ ಮಹೋತ್ಸವವನ್ನು ಮಾಡಲು ಅವಕಾಶ ಮಾಡಿಕೊಡಬೇಕೆಂದು ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ. 

SCROLL FOR NEXT