ರಾಮ್ ವಿಲಾಸ್ ಪಾಸ್ವಾನ್ 
ರಾಜ್ಯ

ಕೇಂದ್ರ ಸಚಿವ ಪಾಸ್ವಾನ್ ನಿಧನ: ಬೆಂಗಳೂರಿನಲ್ಲಿ ಅರ್ಧಮಟ್ಟದಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಕೆ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಬೆಂಗಳೂರು: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಕ್ಟೋಬರ್ 9ರಂದು ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕೇಂದ್ರ ಆಹಾರ ಸಚಿವ, ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ಹಾಗೂ ದೇಶದ ಪ್ರಮುಖ ದಲಿತ ನಾಯಕ ರಾಮವಿಲಾಸ್ ಪಾಸ್ವಾನ್ ಅವರು ಗುರುವಾರ ನಿಧನ ಹೊಂದಿದ್ದಾರೆ. ಕಳೆದ ವಾರ ದೆಹಲಿ ಯಖಾಸಗಿ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ಅವರು, ಶೀಘ್ರದಲ್ಲೇ ಇನ್ನೊಂದು ಸರ್ಜರಿಗೆ ಒಳಗಾಗಬೇಕಿತ್ತು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ. 

15 ದಿನಗಳ ಅಂತರದಲ್ಲಿ ನಿಧನರಾದ ಎರಡನೇ ಕೇಂದ್ರ ಸಚಿವ ಪಾಸ್ವಾನ್ ಆಗಿದ್ದಾರೆ. ಸೆ.23ರಂದಷ್ಟೇ ಕರ್ನಾಟಕ ಮೂಲಕ ರೈಲ್ವೈ ಸಚಿವ ಸುರೇಶ್ ಅಂಗಡಿಯವರು ಕೊರೋನಾದಿಂದ ವಿಧಿವಶರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!