ಐಎಲ್ ಎಸ್ ತಂತ್ರಜ್ಞಾನ 
ರಾಜ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಐಎಲ್ಎಸ್, ವರ್ಷಾಂತ್ಯಕ್ಕೆ ಲ್ಯಾಂಡಿಂಗ್ ಹೆಚ್ಚು ಸರಾಗ ಮತ್ತು ಸುರಕ್ಷಿತ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

ಕಳೆದ ಜನವರಿಯಲ್ಲಿ ಐಎಲ್ಎಸ್ ಉಪಕರಣ ಸ್ಥಾಪಿಸಲಾಗಿದ್ದು, ಲಾಕ್‌ಡೌನ್ ಕಾರಣ ಇತರ ತಾಂತ್ರಿಕ ಪ್ರಕ್ರಿಯೆಗಳು ವಿಳಂಬವಾದವು. ಈಗ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಳೆದು ತಿಂಗಳು ಪ್ರಾಯೋಗಿಕ ಪರೀಕ್ಷೆ ಸಹ ನಡೆಸಲಾಗಿದೆ.

ಐಎಲ್ಎಸ್ ಸ್ಥಾಪನೆಯು ವಿಮಾನ ನಿಲ್ದಾಣ ನವೀಕರಣ ಯೋಜನೆಯ ಭಾಗವಾಗಿದ್ದು, ಅದು ಈಗ ಪೂರ್ಣಗೊಂಡಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ತಿಳಿಸಿದ್ದಾರೆ.

ಈ ಹೊಸ ತಂತ್ರಜ್ಞಾನದಿಂದ ವಿಮಾನ ನಿಲ್ದಾಣದ ಸಿಬ್ಬಂದಿಯ ಅನುಮತಿಗೆ ಕಾಯುವುದು ಬೇಕಿಲ್ಲ. ಐಎಲ್‍ಎಸ್ ನೆಲಮಟ್ಟದಿಂದ ಕಾರ್ಯನಿರ್ವಹಿಸುವ ರೇಡಾರ್ ಆಧಾರಿತ ತಂತ್ರಜ್ಞಾನವಾಗಿದ್ದು, ಪ್ರತಿಕೂಲ ಪರಿಸ್ಥಿತಿಯಲ್ಲಿ ಲ್ಯಾಂಡ್‌ ಆಗಲು ತರಂಗದ ಮೂಲಕ ಪೈಲಟ್‌ಗೆ ಸಂದೇಶ ರವಾನಿಸುತ್ತದೆ. ರನ್‌ ವೇ ಪಕ್ಕದಲ್ಲಿ ಐಎಲ್‌ಎಸ್‌ ಸ್ಥಾಪಿಸಲಾಗಿದ್ದು, ಲಘುವಾದ ಆ್ಯಂಟಿನಾಗಳು ಇರುವ ಕಾರಣ ವಿಮಾನಗಳು ತಾಕಿದರೆ ನೆಲಕ್ಕೆ ಬೀಳುತ್ತವೆ. ಇದರಿಂದ ವಿಮಾನಗಳಿಗೆ ಏನೂ ಹಾನಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!