ರಾಜ್ಯ

ಠಾಣೆ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ, ಕುಲಸಚಿವರ ತಿಕ್ಕಾಟ

Manjula VN

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕವಾದ ಬಳಿಕ ಕುಲಪತಿ ಮತ್ತು ಕುಲಸಚಿವರ ನಡುವೆ ಆಡಳಿತಾತ್ಮಕ ವಿಚಾರಗಳಿಗೆ ತಿಕ್ಕಾಟ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಅಲ್ಲದೆ, ಕುಲಾಧಿಪತಿಗಳಾದ ರಾಜ್ಯಪಾಲರು, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಹಂತಕ್ಕೂ ತಲುಪಿದೆ. 

ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಕುಲಸಚಿವರು ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿದ್ದಾರೆ. ಕುಲಪತಿ ಬೆದರಿಕೆಯೊಡ್ಡುವ ಪ್ರಯತ್ನಗಳು ನಡೆದಿವೆ. 

ವಿಶ್ವವಿದ್ಯಾಲಯ ಅಧಿನಿಯಮ ಅನ್ವಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸದಂತೆ ಕಠಿಣ ಸೂಚನೆ ನೀಡುವಂತೆ ಕೋರಿ ವಿಶ್ವವಿದ್ಯಾಲಯ ಕುಲಸಚಿವರಾದ ಐಎಎಸ್ ಅಧಿಕಾರಿ ಕೆ.ಜ್ಯೋತಿ ಅವರು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. 

ಈ ಪತ್ರದ ಪ್ರತಿಯನ್ನು ರಾಜ್ಯಪಾಲರು, ಮುಖ್ಯಮಂತ್ರಿ, ಮುಖ್ಯಕಾರ್ಯದರ್ಶಿ, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ ಅವರಿಗೂ ಸಲ್ಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಗೂ ದೂರಿನ ಪ್ರತಿ ನೀಡಿ ಕುಲಪತಿ ವಿರುದ್ಧ ಕ್ರಮಕ್ಕೆ ಕೋರಿದ್ದಾರೆ. 

SCROLL FOR NEXT