ಎಸ್.ಟಿ.ಸೋಮಶೇಖರ್ 
ರಾಜ್ಯ

ಹೃದಯ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರಿಂದ ದಸರಾ ಉದ್ಘಾಟನೆ: ಸಚಿವ ಸೋಮಶೇಖರ್

ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಹೈಪವರ್ ಕಮಿಟಿಯಲ್ಲಿ ತೀರ್ಮಾನವಾಗಿದೆ. ಕಳೆದ ಬಾರಿ ಯಾವ ರೀತಿ ಇತ್ತೋ ಅದೇ ರೀತಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ನೂರಾರು ಕಿ.ಮೀ. ದೂರ ಇರುವ ವ್ಯಾಪ್ತಿಯನ್ನು ಕಡಿತಗೊಳಿಸಿ 50 ಕಿಲೋ ಮೀಟರ್ ಗೆ ಸೀಮಿತಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು. ಕೊರೋನಾ ಹಿನ್ನೆಲೆ ಪಾರ್ಕಿಂಗ್ ಗೆ ಎಲ್ಲ ಕಡೆ ಅನುಮತಿ ಕೊಡುವುದಿಲ್ಲ. ಸುರಕ್ಷತೆ ದೃಷ್ಟಿಯಿಂದ ಏನೆಲ್ಲ ಕಾರ್ಯಗಳನ್ನು ಕೈಗೊಳ್ಳಬೇಕೋ ಅದನ್ನು ಪಡೆಯುತ್ತೇನೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT