ಸಂಗ್ರಹ ಚಿತ್ರ 
ರಾಜ್ಯ

ಕೌಟುಂಬಿಕ‌ ಕಲಹ: ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿ ಪರಾರಿ

ಕೌಟುಂಬಿಕ‌ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಗುಪ್ತಾಂಗಕ್ಕೆ ಪತಿ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಪತಿಯೊಬ್ಬ ಪರಾರಿಯಾಗಿರುವ ಘಟನೆ ರಾಮಮೂರ್ತಿ ನಗರದ ಟಿಸಿ ಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಕೌಟುಂಬಿಕ‌ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಗುಪ್ತಾಂಗಕ್ಕೆ ಪತಿ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಪತಿಯೊಬ್ಬ ಪರಾರಿಯಾಗಿರುವ ಘಟನೆ ರಾಮಮೂರ್ತಿ ನಗರದ ಟಿಸಿ ಪಾಳ್ಯದಲ್ಲಿ ನಡೆದಿದೆ.

ಆರೋಪಿ ಸೂರಜ್ ಸಿಂಗ್ ಪರಾರಿಯಾಗಿರುವ ಪತಿ. ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಪತ್ನಿ ಆಸ್ಪತ್ರೆಯಲ್ಲಿ ಜೀವನ್ಮರಣ ನಡುವೆ ಹೋರಾಟ ಮಾಡುತ್ತಿದ್ದಾರೆ.

ಗೃಹಿಣಿ ಮಾಲಾಳಿಗೆ ವರದಕ್ಷಿಣೆಗಾಗಿ ಪತಿ ಹಾಗೂ ಕುಟುಂಬಸ್ಥರು ಸೇರಿ ಬೆಂಕಿ ಹಚ್ಚಿ ಹತ್ಯೆಗೆ ಮುಂದಾಗಿದ್ದಾರೆ. ಈ ಪರಿಣಾಮ ಗೃಹಿಣಿ ಬೆಂಕಿಯಲ್ಲಿ ಅರ್ಧಂಬರ್ಧ ಬೆಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಲ ಮೂಲತಃ ಉತ್ತರ ಪ್ರದೇಶದವರು. ಕಳೆದ ಒಂದು ವರ್ಷದ ಹಿಂದೆ ಸೂರಜ್ ಸಿಂಗ್ ಎಂಬಾತನ ಜೊತೆ ವಿವಾಹವಾಗಿದ್ದರು. ಸುಮಾರು 15 ಲಕ್ಷ ಖರ್ಚು ಮಾಡಿ ಹೆಣ್ಣಿನ ಕಡೆಯವರು ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ಬಳಿಕ ದಂಪತಿ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದರು. ಆದರೆ, ಈ ವೇಳೆ ವರದಕ್ಷಿಣೆ ಕಿರುಕುಳ ಶುರುವಾಗಿದೆ.

ಸೈಟ್ ಕೊಡಿಸುವಂತೆ ಪತಿ ಕುಟುಂಬದವರು ಡಿಮ್ಯಾಂಡ್ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಪತಿ, ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ಮನೆಯಲ್ಲಿ ಒಂಟಿಯಾಗಿದ್ದ ಮಾಲ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. 

ಮಾಲಳ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ