ಅನಂತಕೃಷ್ಣ 
ರಾಜ್ಯ

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತಕೃಷ್ಣ ನಿಧನ

ಮಂಗಳೂರು ಮೂಲದ  ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಅನಂತಕೃಷ್ಣ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಂಗಳೂರು: ಮಂಗಳೂರು ಮೂಲದ  ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಅನಂತಕೃಷ್ಣ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಅವರುಗೆ 74 ವರ್ಷ ವಯಸ್ಸಾಗಿತ್ತು.ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ.

ಬಂಟ್ವಾಳದವರಾದ ಅನಂತಕೃಷ್ಣ 1971 ರಲ್ಲಿ ಕರ್ಣಾಟಕ ಬ್ಯಾಂಕ್‌ಗೆ ಅಧಿಕಾರಿಯಾಗಿ ಸೇರಿದರು. ಅವರು ಕಾರ್ಯಾಚರಣೆ ಮತ್ತು ನಿರ್ವಹಣಾ ಮಟ್ಟದಲ್ಲಿ ವಿಭಿನ್ನ ಸಾಮರ್ಥ್ಯದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 2000 ನೇ ಇಸವಿಯಲ್ಲಿ ಅಧ್ಯಕ್ಷ ಮತ್ತು ಸಿಇಒ ಆಗಿ ನೇಮಕಗೊಂಡರು.

ಅನಂತಕೃಷ್ಣ ಅವರು 2009 ರವರೆಗೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.ಬಳಿಕ  ಅವರು ಬ್ಯಾಂಕಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿದು  2016 ರಲ್ಲಿ ನಿವೃತ್ತರಾದರು.

ಕರ್ಣಾಟಕ ಬ್ಯಾಂಕ್ ಅವರ ನಾಯಕತ್ವದಲ್ಲಿ ತ್ವರಿತ ಪ್ರಗತಿ  ಕಂಡಿದ್ದು ಉತ್ತಮ ಬೆಳವಣಿಗೆಗೆ ಸಾಕ್ಷಿಯಾಗಿತ್ತು, ಅಲ್ಲದೆ ಕರ್ನಾಟಕದ ಹೊರಗೂ ಸಹ ತನ್ನ ಶಾಖೆಯನ್ನು ತೆರೆದಿತ್ತು.

ಅನಂತಕೃಷ್ಣ ಅವರು ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್‌ನ ಗೌರವ ಕಾರ್ಯದರ್ಶಿಯಾಗಿ ಮತ್ತು ಮಂಗಳೂರಿನ ಬ್ಯಾಂಕರ್ಸ್ ಕ್ಲಬ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT