ರಾಜ್ಯ

ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

Raghavendra Adiga

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಲ್ಲಿ ತಿಳಿಸಿದ್ದಾರೆ.

ಶನಿವಾರ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೋವಿಡ್ ಸಮಸ್ಯೆ ಹೆಚ್ಚಾಗಿರುವ ಈ ಕಾಲಘಟ್ಟದಲ್ಲಿ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಹಾಗೂ ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದರು. ಅವರ ಒತ್ತಾಯಕ್ಕೆ ಮಣಿದಿರುವ ಸರ್ಕಾರ ನಿನ್ನೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶಿಸಿತ್ತು. ಇಂದು ಸರ್ಕಾರ ಎ;ಲ್ಲಾ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ಆದೇಶಿಸಿದೆ. 

SCROLL FOR NEXT