ಸಂಗ್ರಹ ಚಿತ್ರ 
ರಾಜ್ಯ

ವಾಯುಭಾರ ಕುಸಿತ: ಭಾರೀ ಮಳೆಗೆ ಸಿಲಿಕಾನ್ ಸಿಟಿ ತತ್ತರ, ರಸ್ತೆಗಳು ಜಲಾವೃತಗೊಂಡು ಜನರ ಪರದಾಟ

ಮುಂಗಾರು ಕೊನೆಗೊಳ್ಳುವ ದಿನಗಳು ಸಮೀಪಿಸುತ್ತಿದ್ದಂತೆಯೇ ನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಶನಿವಾರ ಕೂಡ ನಗರದ ಅನೇಕ ಕಡೆ ಧಾರಾಕಾರ ಮಳೆ ಸುರಿದಿದೆ. ಪರಿಣಾಮ ರಸ್ತೆಗಳು ಜಲಾವೃತಗೊಂಡು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. 

ಬೆಂಗಳೂರು: ಮುಂಗಾರು ಕೊನೆಗೊಳ್ಳುವ ದಿನಗಳು ಸಮೀಪಿಸುತ್ತಿದ್ದಂತೆಯೇ ನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಶನಿವಾರ ಕೂಡ ನಗರದ ಅನೇಕ ಕಡೆ ಧಾರಾಕಾರ ಮಳೆ ಸುರಿದಿದೆ. ಪರಿಣಾಮ ರಸ್ತೆಗಳು ಜಲಾವೃತಗೊಂಡು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. 

ಶನಿವಾರ ಸಂಜೆ 7.30ರ ನಂತರ ನಗರದಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಬೆಂಗಳೂರು ದಕ್ಷಿಣ ಭಾಗದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಸಂಜೆಯ ನಂತರ ಸುರಿದ ಅಭ್ಬರದ ಮಳೆಯಿಂದಾಗಿ ರಸ್ತೆಗಳ ಮೇಲೆ ಚರಂಡಿ ನೀರು ಉಕ್ಕಿ ಹರಿದಿದ್ದು, ಸಂಚಾರ ಅಸ್ತವ್ಯಸ್ತವಾಯಿತು. ಸಂಜೆಯಾಗುತ್ತಲೇ ವ್ಯಾಪಾರಸ್ಥರಿಗೆ ಸಾಕಷ್ಟು ಸಮಸ್ಯೆ ಶುರುವಾಗಿತ್ತು. 

ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಮೆಜೆಸ್ಟಿಕ್. ಕೆ.ಆರ್.ವೃತ್ತ. ಕೆ.ಆರ್.ಮಾರುಕಟ್ಟೆ, ವಿಜಯನಗರ. ರಾಜಾಜಿನಗರ, ಚಾಮರಾಜಪೇಟೆ, ಶಿವಾಜಿನಗರ, ಮೈಸೂರು ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಸ್ತೆಗಳು ಜಲಾವೃತವಾದವು. ಪರಿಣಾಮ ವಾಹನ ಸವಾರರು ಪರದಾಡಿದರು. 

ವಾಯುಭಾರ ಕುಸಿತ: ಅ.13ರವರೆಗೂ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.13 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ತತ್ತರಗೊಂಡಿದ್ದಾರೆ.

ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...