ರಾಜ್ಯ

ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ರಾಜ್ಯ ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದೆ: ಸಚಿವ ಜಾರಕಿಹೊಳಿ ಕಿಡಿ

Manjula VN

ಬೆಂಗಳೂರು: ನೆರೆಯ ತೆಲಂಗಾಣ ಹಾಗೂ ಗೋವಾ ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಜ್ಯ ಸಮರ್ತ ವಾದ ಮಂಡಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. 

ಈ ಎರಡು ಹೊಸ ವಿವಾದಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಬಳಿಕ ಸಚಿವರು ಈ ಬಗ್ಗೆ ಲಿಖಿತ ಹೇಳಿಕೆಯನ್ನು ಬಿಡುಗೆಡ ಮಾಡಿದ್ದಾರೆ. 

ಇದರ ಪ್ರಕಾರ ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ಸರ್ಕಾರವು ಹೊಸ ಹಾಗೂ ಅನಗತ್ಯ ತಗಾದೆ ತೆಗೆದಿದೆ. ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣವು ಈಗಾಗಲೇ ಅಂತಿಮ ತೀರ್ಪು ನೀಡಿದ್ದು, 2013ರಲ್ಲಿಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಗೆ ನೀರು ಹಂಚಲಾಗಿದೆ. ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿತ ತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವೂ ನಿರ್ಧರಿಸಿದೆ. ಇಂತಹ ಸಮಯದಲ್ಲಿ ಹೊಸದಾಗಿ ನ್ಯಾಯಾಧೀಕರಣ ಸ್ಥಾಪಿಸಬೇಕೆಂಬ ತೆಲಂಗಾಅ ವಾತ ಅತಾರ್ಕಿಕ ಎಂದು ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ಗೋವಾ ಸರ್ಕಾರ ಆರೋಪ ಕುರಿತು ಮಾತನಾಡಿರುವ ಅವರು, ಗೋವಾ ಸಿಎಂ ಫೋಟೋ ಹಾಗೂ ವಿಡಿಯೋ ಬಿಡುಗಡೆ ಮಾಡಿ ಮಹದಾಯಿ ನೀರು ಮಲಪ್ರಭಾಗೆ ಹರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇವು ಸೃಷ್ಟಿಸಿರುವ ದಾಖಲೆಗಳು. ಮಹದಾಯಿ ಮತ್ತು ಮಲಪ್ರಭಾ ನದಿ ನಡುವೆ ಪ್ರಬಲ ಗೋಡೆ ನಿರ್ಮಿಸಲಾಗಿದ್ದು, ಒಂದು ಹನಿ ನೀರೂ ಕೂಡ ಮಲಪ್ರಭಾ ನದಿಗೆ ಸೇರಿಲ್ಲ ಎಂದಿದ್ದಾರೆ. 

SCROLL FOR NEXT