ರಾಜ್ಯ

ಕರ್ನಾಟಕದಲ್ಲಿ ದಾಖಲೆಯ ಚೇತರಿಕೆ: ಒಂದೇ ದಿನ 12,030 ಮಂದಿ ಡಿಸ್ಚಾರ್ಜ್, 10 ಸಾವಿರ ದಾಟಿದ ಸಾವಿನ ಸಂಖ್ಯೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸದ ನಡುವೆ ಇಂದು ದಾಖಲೆಯ ಪ್ರಮಾಣದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 12,030 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 

ಇಂದು ರಾಜ್ಯದಲ್ಲಿ 7,606 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7,17,915ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,036ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,498 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,85,055ಕ್ಕೆ ಏರಿಕೆಯಾಗಿದೆ.

ಇಂದು 12,030 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,92,084ಕ್ಕೆ ಏರಿಕೆಯಾಗಿದೆ. 1,15,776 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಪೈಕಿ 928 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT