ಸಿದ್ದರಾಮಯ್ಯ 
ರಾಜ್ಯ

ಶಿಕ್ಷಣ ಸಚಿವರೇ, ಈಗಲಾದರೂ ಕಣ್ತೆರೆಯಿರಿ: ಸಿದ್ದರಾಮಯ್ಯ

ರಾಜ್ಯ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳುಗಳಾದರೂ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ.

ಬೆಂಗಳೂರು: ರಾಜ್ಯ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳುಗಳಾದರೂ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ.

ನೇಮಕಾತಿ ಆದೇಶ ಪತ್ರ ದೊರೆಯದೇ ಇರುವುದರಿಂದ  ನೂರಾರು ಅಭ್ಯರ್ಥಿಗಳು ಮಳೆಯಲ್ಲಿಯೇ  ಪಿಯುಸಿ ಮಂಡಳಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿಕ್ಷಣ ಸಚಿವರೇ, ಈಗಲಾದರೂ ಸಹ ಕಣ್ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 10 ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ, ಸರ್ಕಾರದ ಅಧಿಕೃತ ಆದೇಶವಿದ್ದರೂ ಈ ಉಪನ್ಯಾಸಕರಿಗೆ ನೇಮಕಾತಿ ಆದೇಶ  ನೀಡದಿರುವುದು ಸರ್ಕಾರಿ ಆದೇಶದ ಉಲ್ಲಂಘನೆಯಾಗುತ್ತದೆ.

ಕೂಡಲೇ ಕೌನ್ಸಿಲಿಂಗ್ ನಲ್ಲಿ ಆಯ್ಕೆಯಾದ  ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

‘ನಮಗೆ ಸೇಡು ಬೇಡ, ನ್ಯಾಯ ಬೇಕು’: ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರು