ರಾಜ್ಯ

ಕಾಟನ್ ಪೇಟೆ ಡ್ರಗ್ಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅಶ್ವಿನ್ ಭೋಗಿ ಬಂಧನ

Manjula VN

ಬೆಂಗಳೂರು: ಕಾಟನ್ ಪೇಡೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಪ್ರಕರಣದ ಪ್ರಮುಖ ಆರೋಪಿ ಎಂದೇ ಹೇಳಲಾಗುತ್ತಿದ್ದ ಅಶ್ವಿನ್ ಭೋಗಿಯನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧನಕ್ಕೊಳಪಡಿಸಿರುವ ಪೊಲೀಸರು ವಿಚಾರಣೆಗೆಂದು ಬೆಂಗಳೂರಿಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಈಗಾಗಲೇ ಹಲವು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಇದೇ ಕೇಸ್ ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ರವಿಶಂಕರ್ ನನ್ನು ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಅಶ್ವಿನ್ ಎಂಬಾತನನ್ನು ಬಂಧಿಸಿದೆ.

SCROLL FOR NEXT