ರಾಜ್ಯ

ಬೆಂಗಳೂರಿನ ಕೊಳೆಗೇರಿಯಲ್ಲಿ ರಾಜ್ಯದ ಮೊದಲ ಅಕ್ಕಿ ಎಟಿಎಂ ಸ್ಥಾಪನೆ

ಬಡವರು ಅಕ್ಕಿ ಪಡೆಯಲು ಅನುಕೂಲವಾಗುವಂತೆ ರಾಜ್ಯದ ಪೈಲಟ್ ಅನ್ನಪೂರ್ತಿ ಅಕ್ಕಿ ಎಟಿಎಂನ್ನು ಬೆಂಗಳೂರಿನ ಕೊಳೆಗೇರಿಯಲ್ಲಿ ಸ್ಥಾಪಿಸಲಾಗುತ್ತಿದೆ.

ಬೆಂಗಳೂರು: ಬಡವರು ಅಕ್ಕಿ ಪಡೆಯಲು ಅನುಕೂಲವಾಗುವಂತೆ ರಾಜ್ಯದ ಪೈಲಟ್ ಅನ್ನಪೂರ್ತಿ  ಅಕ್ಕಿ ಎಟಿಎಂನ್ನು  ಬೆಂಗಳೂರಿನ ಕೊಳೆಗೇರಿಯಲ್ಲಿ ಸ್ಥಾಪಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಯೋಜನೆಯಡಿ ಸ್ವಯಂ ಚಾಲಿತ ವಿತರಣಾ ವ್ಯವಸ್ಥೆಯನ್ನು ದೇಶಾದ್ಯಂತ ಅಳವಡಿಸಲಾಗುತ್ತಿದೆ. ಕರ್ನಾಟಕ, ಉತ್ತರ ಪ್ರದೇಶ, ಹರಿಯಾಣ, ಮಹಾರಾಷ್ಟ್ರ ಮತ್ತು ಉತ್ತರ್ ಖಂಡ್ ನ ಐದು ಕಡೆಗಳಲ್ಲಿ ಇಂತಹ ಎಟಿಎಂಗಳನ್ನು ಆರಂಭಿಸಲಾಗುತ್ತಿದೆ ಎಂಬುದು ಇಲಾಖೆಯ ಮುೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಅನ್ನಪೂರ್ತಿ ವಿತರಕರು ವಿಶ್ವ ಆರೋಗ್ಯ ಸಂಸ್ಥೆಯ ಆಹಾರ ಕಾರ್ಯಕ್ರಮದ ಭಾಗವಾಗಿದ್ದು, ಭಾರತ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ. ವಿಶ್ವ ಆಹಾರ ಕಾರ್ಯಕ್ರಮಕ್ಕೆ 2020ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಬಡವರಿಗೆ ಅನುಕೂಲವಾಗುವಂತೆ ಅಕ್ಕಿ ಎಟಿಎಂ ಆರಂಭಿಸಲು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಲೇಖನ ಬರೆಯಲಾಗಿತ್ತು.

ಎಟಿಎಂಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಇದರ ಹೊಣೆಯನ್ನು ಜಂಟಿ ನಿರ್ದೇಶಕರಿಗೆ ಹೆಚ್ಚುವರಿಯಾಗಿ ವಹಿಸಲಾಗುವುದು, ಬಡವರು ಅಧಿಕ ಸಂಖ್ಯೆಯಲ್ಲಿರುವ ಸ್ಥಳಗಳನ್ನುಗುರುತಿಸಲಾಗುವುದು, ಅಂತಹ ಕಡೆಗಳಲ್ಲಿ ಎಟಿಎಂಗಳನ್ನು ಸ್ಥಾಪಿಸಲಾಗುವುದು ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.ಇದು ಎಲ್ಲಾ ದಿನಗಳಲ್ಲಿ ತೆರೆದಿದ್ದು, ಜನರು ಇದರ ಸದುಪಯೋಗಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಅಕ್ಕಿ ಎಟಿಎಂಗಳಲ್ಲಿ 100 ಕೆಜಿಯಿಂದ 500 ಕೆಜಿ ಸಾಮರ್ಥ್ಯವಿರುವ ಸಾಧ್ಯತೆಯಿದ್ದು, ಬೇಡಿಕೆಗನುಗುಣವಾಗಿ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪ್ರಸ್ತುತ ಅನ್ನಭಾಗ್ಯ ಯೋಜನೆಯಡಿ ಸರ್ಕಾರ 1.27 ಕೋಟಿ ಕುಟುಂಬಕ್ಕೆ ಅಕ್ಕಿ, ಧಾನ್ಯ ಮತ್ತಿತರ ಅಗತ್ಯ ವಸ್ತುಗಳನ್ನು ಪ್ರತಿ ತಿಂಗಳು ಪೂರೈಸುತ್ತಿದೆ. 

ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ಧಾನ್ಯಗಳನ್ನು ನೀಡಲಾಗುತಿದ್ದು, ಎಪಿಎಲ್ ಕಾರ್ಡ್ ದಾರರಿಗೆ ಸಾಮಾನ್ಯ ದರದಲ್ಲಿ ವಿತರಿಸಲಾಗುತ್ತಿದೆ. ಬಯೋಮೆಟ್ರಿಕ್ಸ್ ನೊಂದಿಗೆ ಎಟಿಎಂ ಕಾರ್ಡ್ ಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು, ಇದು ಪ್ರಾರಂಭಿಕ ಹಂತವಾಗಿದ್ದು, ಒಂದು ಬಾರಿ ಯಂತ್ರವನ್ನು ಪಡೆದ ನಂತರ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಗೋಪಾಲಯ್ಯ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

SCROLL FOR NEXT