ಸರ್ಕಾರದ ನಿದ್ದೆಗೆಡಿಸಿರುವ ಮಹಾಮಾರಿ ವೈರಸ್: ಕೊರೋನಾ ಮಟ್ಟಹಾಕಲು ಸಭೆ ಕರೆದ ಸಿಎಂ ಯಡಿಯೂರಪ್ಪ
ರಾಜ್ಯ ರಾಜಧಾನಿ ಬೆಂಗಲೂರಿನಲ್ಲಿ ಕೊರೋನಾ ಸೋಂಕು ತೀವ್ರ ಪ್ರಮಾಣದಲ್ಲಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಲಯವಾರು ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಲೂರಿನಲ್ಲಿ ಕೊರೋನಾ ಸೋಂಕು ತೀವ್ರ ಪ್ರಮಾಣದಲ್ಲಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಲಯವಾರು ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸಂಜೆ 4ರಿಂದ ಆರಂಭವಾಗಲಿರುವ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ವಿವಿಧ ವಲಯಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳು ಸಲಹೆ ಸೂಚನೆ ನೀಡಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.