ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರಗೊಂಡರೆ ಪರಿಸ್ಥಿತಿ ಎದುರಿಸಲು ಸಿದ್ಧರಿರುವಿರಾ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕಗೊಂಡರೆ ಸವಾಲು ಎದುರಿಸಲು ಸರ್ಕಾರ ಸಿದ್ಧವಿದೆಯೇ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. 

ಕೋವಿಡ್-19 ಚಿಕಿತ್ಸೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕಗೊಂಡರೆ ಸವಾಲು ಎದುರಿಸಲು ಸರ್ಕಾರ ಸಿದ್ಧವಿದೆಯೇ ಎಂದು ಪ್ರಶ್ನಿಸಿದೆ. 

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಬೇಕಾಗಬಹುದಾದ ಕೋವಿಡ್ ಹಾಸಿಗೆಗಲ ಸಂಭಾವ್ಯ ಅಂದಾಜು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 

ರಾಜ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ 48,848 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಎಷ್ಟು ಹಾಸಿಗೆ ಬೇಕು ಎಂಬ ಅಂದಾಜು ಮತ್ತು ವ್ಯವಸ್ಥೆ ಹೇಗೆ ಎಂಬ ಯೋಜನೆ ಸರ್ಕಾರದ ಬಳಿ ಇರಬೇಕೆಂದು ಸೂಚಿಸಿದೆ. 

SCROLL FOR NEXT