ರೋಹಿಣಿ ಸಿಂಧೂರಿ 
ರಾಜ್ಯ

ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ: ರೋಹಿಣಿ ಸಿಂಧೂರಿ

ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಬುಧವಾರ ಜಿಲ್ಲಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್ಸ್ವಾ ಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಮಾರು 900 ಮಂದಿ ಮೃತಪಟ್ಟಿದ್ದಾರೆ. ಸುಮಾರು 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ದಸರಾ ಸಮಯದಲ್ಲಿ ಲಕ್ಷಾಂತರ ಜನ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹಡುತ್ತಿರುವುದರಿಂದ ಈ ಸಂಖ್ಯೆಯ ಜನರು ಮೈಸೂರಿಗೆ ಆಗಮಿಸಿದರೆ ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!