ರಾಜ್ಯ

ರಸ್ತೆ, ಪಾರ್ಕ್'ಗಳಷ್ಟೇ ಅಲ್ಲ, ಮಾಲ್, ಹೋಟೆಲ್ ಗಳಲ್ಲೂ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ದಂಡ!

Manjula VN

ಬೆಂಗಳೂರು: ರಸ್ತೆ ಹಾಗೂ ಉದ್ಯಾನವನಗಳಷ್ಟೇ ಅಲ್ಲ, ಇನ್ನು ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಧರಿಸದೇ ಹೋದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ. 

ನಗರದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ಬರುತ್ತಿರುವ ಬಿಬಿಎಂಪಿ ಅಧಿಕಾರಿಗಳು ಇದೀಗ ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳಿಗೆ ಭೇಟಿ ನೀಡುವ ಜನರು ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲು ಮುಂದಾಗಿದ್ದಾರೆ. 

ವಾಣಿಜ್ಯ ಪ್ರದೇಶಗಳಲ್ಲಿ ಕೊರೋನಾ ನಿಯಮ ಉಲ್ಲಂಘಿಸುವ ಜನರಿಗೆ ದಂಡ ವಿಧಿಸುವಂತೆ ಮಾರ್ಷಲ್ ಗಳಿಗೆ ಸೂಚನೆ ನೀಡಲಾಗಿದೆ. ಮಾರ್ಷಲ್ ಗಳು ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಿದ್ದಾರೆಂದು ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ಡಾ.ಬಿ.ಕೆ.ವಿಜಯೇಂದ್ರ ಅವರು ಹೇಳಿದ್ದಾರೆ. 

ದಿನಸಿ ಸಾಮಾಗ್ರಿ ಅಂಗಡಿ, ಸಲೂನ್ ಗಳು, ಮಾಲ್ಸ್ ಗಳು ಹಾಗೂ ಇತರೆ ವಾಣಿಜ್ಯ ಪ್ರದೇಶಗಳಲ್ಲಿ ಜನರು ನಿಯಮ ಉಲ್ಲಂಘನೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಕೇವಲ ರಸ್ತೆಗಳಷ್ಟೇ ಅಲ್ಲ, ವಾಣಿಜ್ಯ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಹೆಚ್ಚೆಚ್ಚು ಜನರಿರುವ ಪ್ರದೇಶದಲ್ಲಿ ಕೊರೋನಾ ಶೀಘ್ರಗತಿಯಲ್ಲಿ ಹರಡುತ್ತದೆ ಎಂಬುದು ಜನರಿಗೆ ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ. 

ವಾಣಿಜ್ಯ ಪ್ರದೇಶಗಳಿಗೆ ತೆರಳುತ್ತಿದ್ದಂತೆಯೇ ಜನರು ಮಾಸ್ಕ್ ಗಳನ್ನು ತೆಗೆಯುತ್ತಿದ್ದಾರೆ. ವಾಣಿಜ್ಯ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಜನರು ಮಾಸ್ಕ್ ಗಳನ್ನು ಧರಿಸುತ್ತಿಲ್ಲ. ಮಾಸ್ಕ್ ಧರಿಸದೆ ಸಿಕ್ಕಿಹಾಕಿಕೊಂಡ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. 

SCROLL FOR NEXT