ಶ್ರೀರಾಮುಲು 
ರಾಜ್ಯ

ಪದೇ ಪದೇ ಬಿ.ಶ್ರೀರಾಮುಲು ಅವರೇ ಟಾರ್ಗೆಟ್: ಖಾತೆ ಬದಲಾವಣೆಗೆ ಬೆಂಬಲಿಗರ ಆಕ್ರೋಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರ ಖಾತೆ ಬದಲಾವಣೆ ಮಾಡಿದ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಚಿತ್ರದುರ್ಗ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರ ಖಾತೆ ಬದಲಾವಣೆ ಮಾಡಿದ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಖಾತೆ ಬದಲಾವಣೆ ವಿಷಯ ಜಿಲ್ಲೆಯ ಪ್ರತಿಪಕ್ಷಗಳಿಗೆ ಉತ್ತಮ ಆಹಾರವಾಗಿದೆ, ಜೊತೆಗೆ ಶ್ರೀರಾಮುಲು ಅವರಿಗೆ ಹಿಂಬಡ್ತಿಯಾಗಿದೆ ಎಂದುನ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆಯ ಜೊತೆಗೆ ಆರೋಗ್ಯ ಖಾತೆಯನ್ನು ಮರಳಿ ಕೊಡಬೇಕು ಎಂದು ಅವರ ಬೆಂಬಲಿಗರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಶ್ರೀರಾಮುಲು ಅವರು ಆರೋಗ್ಯ ಇಲಾಖೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದರು. 108 ಆ್ಯಂಬುಲೆನ್ಸ್ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವುದು,
ಸಭೆಗಳನ್ನು ನಡೆಸುವ ಮೂಲಕ ಹಲವು ಬದಲಾವಣೆಳನ್ನು ತಂದಿದ್ದರು ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ಖಾತೆ ಬದಲಾವಣೆಯಿಂದ ಶ್ರೀರಾಮುಲು ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ, ಜೊತೆಗೆ ನಮ್ಮ ನಾಯಕ ಶ್ರೀರಾಮುಲು ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ, ಡಿಸಿಎಂ ಹುದ್ದೆ ನೀಡುವುದಾಗಿ ನೀಡಿದ್ದ ಆಶ್ವಾಸನೆಯನ್ನು ಬಿಜೆಪಿ ಹೈಕಮಾಂಡ್ ಇನ್ನೂ ಈಡೇರಿಸಿಲ್ಲ ಎಂದು ಅಖಿಲ ಕರ್ನಾಟಕ ಶ್ರೀರಾಮುಲು ಅಭಿಮಾನಿಗಳ ಸಂಘದ ಅಧ್ಯಕ್ಷ ಬಿ ವಿಜಯ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ