ರಾಜ್ಯದಲ್ಲಿ ಕೊರೋನಾಗೆ ಇಂದು 85 ಬಲಿ, ಬೆಂಗಳೂರಿನಲ್ಲಿ 3,788 ಸೇರಿ 8,477 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 85 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,283ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,788 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,97,193ಕ್ಕೆ ಏರಿಕೆಯಾಗಿದೆ. ನಗರದಲ್ಲಿ 45 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು 8,841 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,20,008ಕ್ಕೆ ಏರಿಕೆಯಾಗಿದೆ. 1,13,538 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.