ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಹೆಸರಿನಲ್ಲಿ ನಕಲಿ ಬಿಲ್: ವಂಚಕ ಜಾಲ ಬೇಧಿಸಿದ ಕೃಷಿ ಇಲಾಖೆ

ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡ ಜಾಲವನ್ನು ಬೇದಿಸಲಾಗಿದೆ.

ಬೆಂಗಳೂರು: ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡ ಜಾಲವನ್ನು ಬೇದಿಸಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಡಿಗಿನಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಸಂಸ್ಥೆ ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಕೃಷಿ ಇಲಾಖೆ ವಿತರಿಸುತ್ತಿದ್ದ ಯೂರಿಯಾ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಂಡು, ಕಾಂಟ್ರಾಕ್ಟ್ ದಾರರನ್ನು ಬುಕ್ ಮಾಡಿಕೊಂಡು ನೈಟ್ರೋಜನ್ ಎಕ್ಸ್ಟ್ರಾಕ್ಟ್ ಮಾಡಿ ಕೆಮಿಕಲ್ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಇದರಿಂದ ರೈತರಿಗೆ ಗೊಬ್ಬರದ ಅಭಾವ ಸೃಷ್ಟಿಯಾಗಿರುವುದು ಕಂಡುಬಂದಿದೆ.

ಹೀಗೆ ಸಬ್ಸಿಡಿ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿದ್ದ ಮರ್ಕೂರಿ ಪಾಲಿಮರ್ಸ್ ಸಂಸ್ಥೆಯ ಮಾಲೀಕರು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕೃಷಿ ಇಲಾಖೆ ದೂರು ದಾಖಲಿಸಿದೆ.

ಇದೆ ಅಕ್ಟೋಬರ್ 14 ರಂದು ಕೋಲಾರ ಜಿಲ್ಲೆಯ ಜಾಗೃತಕೋಶದ ಸಹಾಯಕ ನಿರ್ದೇಶಕ, ಜಾರಿದಳ ಜಂಟಿ ಕೃಷಿ ನಿರ್ದೇಶಕ ಹೆಚ್.ಕೆ.ರಾಮಕೃಷ್ಣ ಅವರಿಗೆ ಬಂದ ಖಚಿತ ದೂರಿನ ಮೇರೆಗೆ ಕೊಡಗಿನಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಕಂಪೆನಿಯ ಗೋಡೌನ್ ಮೇಲೆ ದಾಳಿ ಮಾಡಿದಾಗ ಕಂಪೆನಿಗೆ ಸೇರಿದ ಲಾರಿ ಚಾಲಕ ಕೃಷಿ ಇಲಾಖೆಗೆ ಸೇರಿದ ಸುಮಾರು 440 ಯೂರಿಯಾ ಮೂಟೆಗಳನ್ನು ತನ್ನ ಮಾಲೀಕ ಕೃಷ್ಣಪ್ರಸಾದ್ ರೆಡ್ಡಿಯ ಸೂಚನೆ ಮೇರೆಗೆ ವೇಮಗಲ್ಗೆ ತೆಗೆದುಕೊಂಡು ಹೋಗದೇ ಮರ್ಕೂರಿ ಪಾಲಿಮರ್ ಗೋಡೌನ್ ಬಳಿ ಇಳಿಸಿ ದಾಸ್ತಾನು ಮಾಡಿದ್ದು ಪತ್ತೆಯಾಗಿರುತ್ತದೆ.

ಅಲ್ಲದೇ ಈ ಯೂರಿಯಾ ಮೂಟೆಗಳು ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿದ್ದು ಕಂಡು ಬಂದಿರುತ್ತದೆ. ಸ್ಥಳದಲ್ಲಿ ವಿಚಕ್ಷಣಾ ದಳ ಸುಮಾರು 1,17,260 ರೂ.ಮೌಲ್ಯದ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡಿದೆ.

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಕಂಪೆನಿ ವಿರುದ್ಧ ದೂರು ದಾಖಲಾಗಿದೆ. ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ