ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಬೆತ್ತಲೆ ಫೋಟೋ ಹಾಕುತ್ತಿದ್ದ ಆರೋಪಿ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕಾಡುಗೋಡಿ ನಿವಾಸಿ ಜಗದೀಶ್, ಖಾಸಗಿ ಕಂಪನಿ ಉದ್ಯೋಗಿ. ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನ ವಿರುದ್ಧ ಯುವತಿಯರಿಬ್ಬರು ಇತ್ತೀಚೆಗೆ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದರು. 

‘ಯುವತಿಯರ ಫೋಟೊ ಬಳಸಿಕೊಂಡು ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿ, ಯುವತಿಯರ ಸ್ನೇಹ ಸಂಪಾದಿಸುತ್ತಿದ್ದ. ಅವರ ಜೊತೆ ಚಾಟಿಂಗ್ ಮಾಡಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ, ನಂತರ ಅವರ ಬೆತ್ತಲೆ ಫೋಟೋಗಳನ್ನು ಕಳುಹಿಸುವಂತೆ ಒತ್ತಾಯ ಮಾಡುತ್ತಿದ್ದ. ನಂತರ ಅವರ ಫೋನ್ ನಂಬರ್ ಪಡೆದು ಅಶ್ಲೀಲ ಸಂದೇಶ ರವಾನಿಸುತ್ತಿದ್ದ, ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಮತ್ತು ಫೋನ್ ನಂಬರ್ ಹಾಕಿ ಅವರನ್ನು ಕೆಟ್ಟದ್ದಾಗಿ ಬಿಂಬಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 17 ಯುವತಿಯರು ಈತನಿಂದ ಕಿರುಕುಳಕ್ಕೊಳಗಾಗಿದ್ದಾರೆ. ಟೆಕ್ನಿಷಿಯನ್ ಗಳ ಸಹಾಯ ಪಡೆದು ಆತನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.  ನಂತರ ಆತನಿಂದ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ಪೊಲೀಸರು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT