ರಾಜ್ಯ

ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರಕ್ಕೆ ಆಗ್ರಹ

Raghavendra Adiga

ಕಲಬುರಗಿ : ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿ ಎದುರಿಸಲು ಪ್ರವಾಹ ಪೀಡಿತ ಜಿಲ್ಲಾಡಾಳಿತಕ್ಕೆ 5 ಕೋಟಿ ರೂಪಾಯಿ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಪ್ರವಾಹದಿಂದ 3,31,170 ಹೆಕ್ಟರ್ ಬೆಳೆ, 23,996 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, 1268 ಸೇತುವೆ ಕುಸಿದಿದ್ದು 173 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.

ರಾಜ್ಯದ ಮಳೆ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಕೇಂದ್ರವನ್ನು ಒತ್ತಾಯ ಮಾಡಲಾಗುವುದು ಎಂದು ಹೇಳಿದರು.

ಮಳೆಯಿಂದ ಈವರೆಗೆ 10 ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದುಬಿದ್ದಿವೆ . 360 ಕೆರೆಗಳು ಒಡೆದು ಹಾನಿಯಾಗಿದೆ. ಜೊತೆಗೆ 3,168 ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದೆ ಎಲ್ಲಾ ಡಿಸಿಗಳ ಖಾತೆಯಲ್ಲಿ ಹಣವಿದ್ದು ಪರಿಹಾರಕ್ಕೆ ತೊಂದರೆಯಿಲ್ಲ ಎಂದರು. 

SCROLL FOR NEXT