ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋವಿಡ್-19 ವೇಳೆಯಲ್ಲಿ ಚುನಾವಣೆ, ಉಪ ಚುನಾವಣೆಗಾಗಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಚುನಾವಣೆ ಮತ್ತು ಉಪ ಚುನಾವಣೆ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 16 Oct 2020, 8:17 pm

ಬೆಂಗಳೂರು: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಚುನಾವಣೆ ಮತ್ತು ಉಪ ಚುನಾವಣೆ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಪ್ರತಿಯೊಂದು ಚುನಾವಣೆ ಸಂಬಂಧಿತ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಮತದಾನ ಉದ್ದೇಶಕ್ಕಾಗಿ ಕೊಠಡಿ, ಹಾಲ್, ಆವರಣ ಪ್ರವೇಶಿಸುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಯಾನಿಂಗ್ ಮಾಡಬೇಕು, ಸ್ಯಾನಿಟೈಸರ್ , ಸೋಪ್ ಮತ್ತು ನೀರು ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.

ಎಲ್ಲಾ ಸಂದರ್ಭದಲ್ಲಿ  2 ಮೀಟರ್ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಸಾಮಾಜಿಕ ಅಂತರ ನಿಯಮ ಕಾಯ್ದುಕೊಳ್ಳಲು ಅನುವಾಗುವಂತೆ ದೊಡ್ಡ ಹಾಲ್ ಗಳನ್ನು ಗುರುತಿಸಬೇಕು, ಚುನಾವಣಾ ಸಿಬ್ಬಂದಿ, ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯಲು ಸೂಕ್ತ ವಾಹನಗಳ ವ್ಯವಸ್ಥೆ ಮಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Advertisement

Advertisement

ಕೋವಿಡ್-19 ಸಂಬಂಧಿತ ವ್ಯವಸ್ಥೆಗಳನ್ನು ನೋಡಿಕೊಳ್ಳಲು ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ನೋಡಲ್ ಆರೋಗ್ಯ ಅಧಿಕಾರಿಯನ್ನು ನಿಯೋಜಿಸಬೇಕು, ಚುನಾವಣಾ ಸಿಬ್ಬಂದಿಗೆ ದೊಡ್ಡ ಹಾಲ್ ಗಳಲ್ಲಿ ತರಬೇತಿ ನೀಡಬೇಕು, ಒಂದೊಂದು ಮತಗಟ್ಟೆಗಳಲ್ಲಿ 1500 ಮತದಾರರ ಬದಲಿಗೆ ಗರಿಷ್ಠ 1 ಸಾವಿರ ಮತದಾರರು ಇರಬೇಕು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments