ರಾಜ್ಯ

ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Manjula VN

ಬೆಂಗಳೂರು: ರಾಜ್ಯದ 58 ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 

ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ವರ್ಗಕ್ಕೆ ಮೀಸಲು ನಿಗದಿಪಡಿಸಿರುವ ಕ್ರಮ ಪ್ರಶ್ನಿಸಿ ಹೆಚ್.ವಿ.ಚಂದ್ರೇಗೌಡ ಸೇರಿ ಹಾಸನ ವಗರ ಸಭೆಯ 21 ಮಂದಿ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಹಾಗೆಯೇ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ನಿರ್ಧಾರಕ್ಕೆ ನೋಟಿಸ್ ಜಾರಿಗೊಳಿಸಿತು. 

ಇದೇ ವೇಳೆ ರೊಟೇಷನ್ ಪದ್ಧತಿ ಪ್ರಕಾರ ಕರಡು ಮೀಸಲು ಪಟ್ಟಿ ತಯಾರಿಸಿ ಸಲ್ಲಿಸಲು ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಚುನಾವಣಾ ಆಯೋಗದ ಪರ ವಕೀಲ ಹಿರಿಯ ನ್ಯಾಯವಾದಿ ಕೆ.ಎನ್.ಫಣೀಂದ್ರ ಹಾಗೂ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರನ್ನೊಳಗೊಂಡ ಅರ್ಜಿದಾರರ ಪರ ವಕೀಲರಕ ಮೊಹಮ್ಮದ್ ತಹೀರ್, ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಅಸ್ಟಿ ವರ್ಗಕ್ಕೆ ಮೀಸಲಿಡಲಾಗಿದೆ. ಆದರೆ, ನಗರಸಭೆ ವ್ಯಾಪ್ತಿಯಲ್ಲಿ ಎಸ್ಟಿ ಜನಸಂಖ್ಯೆ ಹೆಚ್ಚು ಇಲ್ಲ. ನಗರ ಸಭೆಯ 35 ಸ್ಥಾನಗಳ ಪೈಕಿ ಕೇವಲ ಒಂದು ವಾರ್ಡ್ ಮಾತ್ರ ಎಸ್ಟಿ ವರ್ಗಕ್ಕೆ ಮೀಸಲಾಗಿತ್ತು. ಅಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ. 17 ಸ್ಥಾನಗಳನ್ನು ಗೆದ್ದಿರುವ ಜೆಡಿಎಸ್ ನ್ನು ಅಧಿಕಾರದಿಂದ ದೂರ ಇಡಲು ರಾಜಕೀಯ ದುರುದ್ದೇಶದಿಂದ ಎಸ್ಟಿ ಮೀಸಲಾತಿ ನಿಗದಿಪಡಿಸಲಾಗಿದೆ. ಕಾನೂನಿಗೆ ವಿರುದ್ಧವಾದ ಈ ಮೀಸಲಾತಿ ರದ್ದುಪಡಿಸಿ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ-ಮಹಿಳೆ ಅಥವಾ ಸಾಮಾನ್ಯ ವರ್ಗಕ್ಕೆ ಮರುಹಂಚಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದರು. 

ಜೊತೆಗೆ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ 2020ರ ಅ.8ರಂದು ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಬೇಕು. 2020ರ ಮಾ.11ರ ಅಧಿಸೂಚನೆಯಂತೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ಅಥವಾ ಸಾಮಾನ್ಯ-ಮಹಿಳೆ ವರ್ಗಕ್ಕೆ ಮೀಸಲು ನಿಗದಿಪಡಿಸಿ ಹೊಸ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸೂಚಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗ ಅಧಿಸೂಚನೆಗೆ ತಡೆ ನೀಡಬೇಕೆಂದು ಕೋರಿದರು. 

ಅದನ್ನು ಆಕ್ಷೇಪಿಸಿದ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಮಾರ್ಗಸೂಚಿ ಪಾಲಿಸಿ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಆಧರಿಸಿ ಮೀಸಲಾತಿ ನಿಗದಿಪಡಿಸಲಾಗಿದೆ. ಮೀಸಲಾತಿಯನ್ನು ಒಂದಲ್ಲ. ಒಂದು ರೀತಿ ಪ್ರಶ್ನೆ ಮಾಡುತ್ತಲೇ ಬರಲಾಗುತ್ತಿದೆ. ಇದರಿಂದ ಚುನಾಯಿತ ಜನಪ್ರತಿನಿಧಿಗಳ ಆಡಳಿವೇ ಇಲ್ಲದಂತಾಗಿದೆ ಎಂದರು. 

SCROLL FOR NEXT