ರಾಜ್ಯ

ಸೋಮವಾರದಿಂದ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Manjula VN

ಬೆಂಗಳೂರು: ಈಗಾಗಲೇ ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿ ಹೋಗಿರುವ ರಾಜ್ಯ ಜನತೆಗೆ ಹವಾಮಾನ ಇಲಾಖೆಯ ನೀಡಿರುವ ಮಾಹಿತಿಯೊಂದು ಆಘಾತ ನೀಡಿದೆ. 

ರಾಜ್ಯದ ಉತ್ತರ ಭಾಗ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸೋಮವಾರದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು. ಬಂಗಾಳಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾಮ ಅಕ್ಟೋಬರ್ 19ರಿಂದ ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದಾರೆ. 

ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಹಾಗೂ ದಕ್ಷಿಣ ಭಾಗದ ಕರಾವಳಿ ತೀರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಅಕ್ಟೋಬರ್ ತಿಂಗಳಿನಲ್ಲಿ ಮಳೆಯಾಗುವುದು ಸಾಮಾನ್ಯ. ಆದರೆ, ಈ ಮಳೆ ನವೆಂಬರ್ ತಿಂಗಳವರೆಗೂ ಮುಂದುವರೆಯುವುದು ಅತ್ಯಂತ ವಿರಳ. ಈ ಬಾರಿ ನವೆಂಬರ್ ತಿಂಗಳವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಈ ಬಾರಿಯ ಮುಂಗಾರು ಸಮಯದಲ್ಲಿ ರಾಜ್ಯದಲ್ಲಿ ಶೇ.49ರಷ್ಟು ಮಳೆಯಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲಿಯೇ ಶೇ.53ರಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

SCROLL FOR NEXT