ರಾಜ್ಯ

ಮೈಸೂರು: ತೀವ್ರ ವಿರೋಧದ ಬಳಿಕ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

Manjula VN

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. 

ಕೊರೋನಾ ನಿಯಂತ್ರಣಗೊಳಿಸಲು ಜನ ಸಂದಣಿ ಹೆಚ್ಚು ಸೇರದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರವಾಸಿ ತಾಣಗಳಿಗೆ ಸೀಮಿತಿ ಅವಧಿಗೆ ಅನ್ವಯವಾಗುವಂತೆ ಸಾರ್ವಜನಿಕ ಪ್ರವಾಸಿ ನಿರ್ಬಂಧಿಸಿ ಆದೇಶಿಸಿದ್ದರು. ಇದಕ್ಕೆ ಹೋಟೆಲ್ ಮಾಲೀಕರ ಸಂಘ, ಪ್ರವಾಸಿ ವಾಹನ ಚಾಲಕರು ಮತ್ತು ಮಾಲುಕರ ಸಂಘ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. 

ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್'ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ನಗರದ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಮತ್ತು ನಂಜನಗೂಡು ದೇವಾಲಯಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದರ ಜೊತೆಗೆ ಮಂಡ್ಯ ಜಿಲ್ಲಾಡಳಿತದ ಮೂಲಕ ಕೆಆರ್'ಎಸ್ ಮತ್ತು ರಂಗನತಿಟ್ಟು ಪ್ರವಾಸಿ ತಾಣಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಿರ್ಬಂಧ ತೆರವುಗೊಳಿಸಲಾಗಿದೆ. 

SCROLL FOR NEXT