ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.
ಶಿಕಾರಿಪುರ: ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.
ನಾಳೆ ಶಿಕಾರಿಪುರ ತಾಲೂಕಿನ ಕಸಬಾ ಏತ ನೀರಾವರಿ ಯೋಜನೆ, ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳದ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಗರಿಷ್ಠ ಪ್ರಮಾಣದ ಆರ್ಥಿಕ ನೆರವನ್ನು ವಿಸ್ತರಿಸಲಿದೆ ಎಂದರು.
ನವೆಂಬರ್ 3 ರಂದು ನಡೆಯಲಿರುವ ರಾಜರಾಜೇಶ್ವರಿ ಹಾಗೂ ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವ ವಿಶ್ವಾಸದಲ್ಲಿರುವುದಾಗಿ ಯಡಿಯೂರಪ್ಪ ತಿಳಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.