ರಾಜ್ಯ

ಜಾತಿ ಜನಗಣತಿ ವರದಿ ಜಾರಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಹೋರಾಟಕ್ಕೆ ತೀರ್ಮಾನ

Nagaraja AB

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಜಾತಿಗಣತಿ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯತಂತ್ರಗಳ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಗರದಲ್ಲಿಂದು ಸಮಾಲೋಚನಾ ಸಭೆ ನಡೆಸಿತು.

ಲಾಲ್ ಬಾಗ್ ರಸ್ತೆಯಲ್ಲಿನ ಗೋಡ್ವಾಡ್ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ‌ಕೆ‌ಎಸ್ ಈಶ್ವರಪ್ಪ, ಮಾಜಿ ಸಚಿವ ಎಚ್ ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ ಪಿ ನಂಜುಂಡಿ, ಹಿಂದುಳಿದ ವರ್ಗಗಳ ವಿವಿಧ ಸ್ವಾಮೀಜಿಗಳು ಭಾಗವಹಿಸಿದ್ದರು.

 ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣವೇ ಅಧ್ಯಕ್ಷರನ್ನು ನೇಮಿಸುವ ಜತೆಗೆ ಜಾತಿಜನಗಣತಿ ಆಧಾರದ ಮೇಲೆ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಕೂಡಲೇ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಸಾಮಾಜಿಕ, ಆರ್ಥಿಕ ಜಾತಿಜನಗಣತಿ ಸಮೀಕ್ಷೆ ನಡೆಸಲಾಗಿತ್ತು.ಈ ವರದಿ ಜಾರಿ ಮಾಡಿಸುವುದಾಗಿ ಸಚಿವ ಹಾಗೂ ಕುರುಬ ಸಮುದಾಯದ ಮುಖಂಡ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ. ಅವರ ಮಾತುಗಳ ಮೇಲೆ ನಂಬಿಕೆ ಇಡಲು ಸಾಧ್ಯವಿಲ್ಲ. ಹೀಗಾಗಿ ಜಾತಿಗಣತಿ ವರದಿ ಸ್ವೀಕರಿಸಿ ಅನುಷ್ಠಾನಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು‌.

SCROLL FOR NEXT