ರಾಜ್ಯ

ವೈಮಾನಿಕ ಸಮೀಕ್ಷೆ ನಂತರ ಹೆಚ್ಚಿನ ನೆರವಿಗಾಗಿ ಪ್ರಧಾನಿ ಮೋದಿಗೆ ಮನವಿ: ಸಿಎಂ ಯಡಿಯೂರಪ್ಪ

Srinivasamurthy VN

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಹೆಚ್ಚಿನ ನೆರವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 21 ರಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಿ ಹೆಚ್ಚಿನ ಪರಿಹಾರ ನೀಡವವಂತೆ ಮನವಿ ಮಾಡಿಕೊಳ್ಳಲಾಗುವುದು. ಮಾತುಕತೆ ವೇಳೆ ಪ್ರಧಾನಿ ಮೋದಿಯವರಿಗೆ ಮಳೆ, ಅತಿವೃಷ್ಟಿಯಿಂದಾಗಿರುವ ನಷ್ಟದ ಕುರಿತು ಮಾಹಿತಿ ನೀಡಿ, ಪರಿಹಾರ ಕ್ರಮಗಳಿಗೆ ಹೆಚ್ಚಿನ ಹಣ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆ. ಮನೆ ಹಾಗೂ ಭೂಮಿ ಕಳೆದುಕೊಂಡವರಿಗೆ ಪರಿಹಾರ ವಿತರಣೆಯ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ್ದ ಪ್ರವಾಹ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ನೀಡಲಾಗಿಲ್ಲ. ಪ್ರವಾಹ, ಭಾರೀ ಮಳೆ, ಭೂ ಕುಸಿತದಿಂದಾಗಿ ರಾಜ್ಯಕ್ಕೆ ರೂ.8,060 ಕೋಟಿ ನಷ್ಟವಾಗಿತ್ತು. ಆಧರೆ, ಸರ್ಕಾರ ಮಾತ್ರ ಕೇಂದ್ರದಿಂದ ರೂ.4,000 ಪರಿಹಾರ ಕೇಳಿತ್ತು. ಕೇಂದ್ರದ ತಂಡವೇ ರಾಜ್ಯಕ್ಕೆ ಭೇಟಿ ನೀಡಿ ಪ್ರವಾಹದಿಂದಾದ ನಷ್ಟವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಪರಿಶೀಲನೆ ನಡೆಸಿತ್ತು. ಆದರೂ, ಕೇಂದ್ರದಿಂದ ಈ ವರೆಗೂ ಯಾವುದೇ ಪರಿಹಾರಗಳೂ ಬಂದಿಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT