ರಾಜ್ಯ

ಪ್ರತಿಯೊಬ್ಬರಿಗೂ ನಿವೇಶನ, ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ

Srinivasamurthy VN

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು.ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು.ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು.

ಈ ಬಾರಿ ಉತ್ತಮ ಮಳೆಯಾಗಿದ್ದು,ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ .ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು,ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರ ದಲ್ಲಿ ಒದಗಿಸಲಾಗುತ್ತಿದೆ.ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40 ಕೋಟಿ ರೂ ನಿಗದಿಪಡಿಸಲಾಗಿದೆ ಎಂದರು.

ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ,ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯ ತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ.ಮುಂದಿನ ಒಂದೆರಡು ವಾರಗಳ ಒಳಗಾಗಿ ಇನ್ನೂ 13 ಗ್ರಾಮ ಪಂಚಾಯತ್ ವ್ಯಾಪ್ತಿಯ 1ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ, ಕೃಷಿಕರಿಗೆ ಕೃಷಿ ಯಂತ್ರೋಪಕರಣ ,ವಿದ್ಯಾರ್ಥಿಗಳಿಗೆ ಲಾಪ್ ಟಾಪ್,ಆಕಸ್ಮಿಕವಾಗಿ ಸಾವಿಗೀಡಾದ ರೈತರಿಗೆ ಪರಿಹಾರ ಧನ ವಿತರಿಸಿದರು.ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

SCROLL FOR NEXT