ರಾಜ್ಯ

ಮೈಸೂರು: ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ, ಮೊಮ್ಮಗಳು ಬಚಾವ್

 ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗೂ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗೂ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಮೃತರನ್ನು ಅಕ್ಕಮ್ಮ(60), ರಶ್ಮಿ (35) ಎಂದು ಗುರುತಿಸಲಾಗಿದ್ದು, ಅಕ್ಕಮ್ಮನ ಮೊಮ್ಮಗಳು ಮಿಂಚುವನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದರು. ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ. 

ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣವೇನೆಂದು ಪತ್ತೆಯಾಗಿಲ್ಲ. ಈ ಸಂಬಂಧ ನಂಜನಗೂಡು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT