ಶಂಕರ್, ಪಾಂಡೆ ದಾಖಲೆಯ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ 
ರಾಜ್ಯ

ಶಂಕರ್, ಪಾಂಡೆ ದಾಖಲೆ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ

ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ  8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. 

ದುಬೈ: ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ  8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. 

ರಾಜಸ್ಥಾನ ರಾಯಲ್ಸ್ ನೀಡಿದ್ದ 155 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಯಕ ಡೇವಿಡ್ ವಾರ್ನರ್ ಮತ್ತು ಜಾನಿ ಬೈರ್‍ಸ್ಟೋವ್ ಅವರ ವಿಕೆಟ್ ನ್ನು ಬಹುಬೇಗ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು. 

ಮೂರನೇ ವಿಕೆಟ್‍ಗೆ ಜೊತೆಯಾದ ಮನೀಷ್ ಪಾಂಡೆ ಹಾಗೂ ಶಂಕರ್ 140 ರನ್‍ ಗಳನ್ನು ಜೊತೆಯಾಟ ಆಡಿ ರೈಸರ್ಸ್ ಗೆ 8 ವಿಕೆಟ್‍ಗಳ ಜಯ ದೊರಕಿಸಿಕೊಟ್ಟಿದ್ದು, ಸನ್‍ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ 100 ರನ್ ಗಳ ಜೊತೆಯಾಟವಾಡಿದ ಮೊದಲ ಜೋಡಿ ಎಂಬ ದಾಖಲೆ ನಿರ್ಮಿಸಿದ್ದಾರೆ. 

ಜೊತೆಗೆ ಪಾಂಡೆ ಮತ್ತು ವಿಜಯ್ ಶಂಕರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವಾಡಿ ಆರಂಭದಲ್ಲಿ ಆಘಾತ ಎದುರಿಸಿದ್ದ ತಂಡಕ್ಕೆ ನೆರವಾದರು. ಈ ಮೂಲಕ ಅಂಕಪಟ್ಟಿಯಲ್ಲಿ  ಎಸ್ ಹೆಚ್ಆರ್ ಗೆ ಐದನೇ ಸ್ಥಾನಕ್ಕೆ ಜಿಗಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ