ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು 8,749 ಡಿಸ್ಚಾರ್ಜ್, 5,356 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಶುಕ್ರವಾರ 5,356 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಶುಕ್ರವಾರ 5,356 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,821ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,688 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,21,054ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 21 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,749 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,93,584ಕ್ಕೆ ಏರಿಕೆಯಾಗಿದೆ. 89,483 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 936 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!