ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜನಗರ: ಸುತ್ತಿಗೆಯಿಂದ ಹೊಡೆದು ಪತ್ನಿ ಕೊಂದು ಶವ ಪೂಜೆಗೆ ತಯಾರಿ ನಡೆಸಿದ್ದ ಪತಿರಾಯ!

ಕೌಟಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ನಡೆದಿದೆ.

ಚಾಮರಾಜನಗರ: ಕೌಟಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಹಾದೇವ ತನ್ನ ಪತ್ನಿ ಸಿದ್ದಮ್ಮ(28)ಳನ್ನು ಕೊಲೆ ಮಾಡಿದ್ದಾನೆ. ಆರೋಪಿ ಮಹಾದೇವ ಕುಡಿತದ ಚಟಕ್ಕೆ ದಾಸನಾಗಿದ್ದ ಕೊಡಗಿನಲ್ಲಿ ಕೂಲಿ ಮಾಡುತ್ತಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮಕ್ಕೆ ಹಿಂತಿರುಗಿ ಬಂದಿದ್ದ ಎಂದು ತಿಳಿದುಬಂದಿದೆ.

ಶುಕ್ರವಾರ ಸಂಜೆಯೂ ಕುಡಿದು ಬಂದ ಮಹಾದೇವ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸುತ್ತಿಗೆ ಮತ್ತು ಮಚ್ಚಿನಿಂದ ತಲೆಗೆ ಹೊಡೆದು ಕೊಂದಿದ್ದಾನೆ. ಬಳಿಕ, ಪತ್ನಿಯ ಕಾಲುಗಳನ್ನು ಮಡಚಿ, ಅಗರಬತ್ತಿ ಹಚ್ಚಿ ಕುಳಿತಿದ್ದ ವೇಳೆ ಮಗ ಮನೋಜ್ ಮನೆಗೆ ಬಂದು ತಾಯಿ ಶವ ಕಂಡು ಅಳತೊಡಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮೃತಳ ಅಣ್ಣ ನಾಗ ಎಂಬಾತ ದೂರು ನೀಡಿದ್ದು, ಪತಿಯನ್ನು ಮಹದೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ‌.‌ ಈ ಘಟನೆ ಕುರಿತು ಮಹದೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ: ಗುಳಿಪುರ ನಂದೀಶ.ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ